ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಬಸ್ ಪಾಸ್‌ಗಳಿಗೆ ವಾರ್ತಾ ಇಲಾಖೆ ಅನುಮೋದನೆ ನೀಡಿದೆ. ವಾರ್ತಾ ಇಲಾಖೆ ಆಯುಕ್ತರಾದ ಎಂ.ಎನ್. […]
Category: Kannada News
ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ಧರ್ಮಸ್ಥಳಕ್ಕೆ ಭೇಟಿ
ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ – ಮಂದಿರ ಪ್ರಮುಖ್ ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
