ಮಂಗಳೂರು: ಹಿಂದಿನ ಕಷ್ಟಕಾಲದಲ್ಲಿ ಪ್ರಕೃತಿಯ ಆಹಾರಗಳನ್ನು ಮದ್ದಾಗಿ ತೆಗೆದುಕೊಳ್ಳುತ್ತಿದ್ದರು. ಈಗಿನ ಯಾoತ್ರಿಕ ಯುಗದಲ್ಲಿ ಅದನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಮಂಗಳೂರಿನ ಹಿರಿಯ ವಕೀಲ ಅರುಣ್ ಬಂಗೇರ ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ನಾರಾಯಣ […]
Category: ಸ್ಥಳೀಯ/ರಾಜ್ಯ
ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ಧರ್ಮಸ್ಥಳಕ್ಕೆ ಭೇಟಿ
ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ – ಮಂದಿರ ಪ್ರಮುಖ್ ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
