ಮಂಗಳೂರು, ಜೂ.08:- ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆಯ ಪುನರ್ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ಜೂನ್ 5 ರಿಂದ 3 ತಿಂಗಳವರೆಗೆ […]
Category: ಸ್ಥಳೀಯ/ರಾಜ್ಯ
ಉಜಿರೆ: ವಿದ್ಯೇಂದ್ರ ತೀರ್ಥಶ್ರೀಪಾದರ ಧರ್ಮಸ್ಥಳ ಭೇಟಿ
ಉಜಿರೆ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
