ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ಇತ್ತೀಚೆಗೆ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಯಶಸ್ಸನ್ನು ಸಾಧಿಸಿತ್ತು. ಆ ಪ್ರಕಾರ ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕೂಡ ಬಿಜೆಪಿಯ ಮುಂದಾಳುಗಳು ಆಯ್ಕೆಗೊಂಡರು. ಅಧ್ಯಕ್ಷರಾಗಿ ಗುರುರಾಜ್ ಮಲ್ಲಿಗೆಯಂಗಡಿ ಹಾಗೂ ಉಪಾಧ್ಯಕ್ಷರಾಗಿ ಪದ್ಮಲತಾ ರಾವ್ ಆಯ್ಕೆಯಾಗಿರುತ್ತಾರೆ.

ಆಯ್ಕೆಗೊಂಡ ಗುರುರಾಜ್ ಹಾಗೂ ಪದ್ಮಲತಾ ಅವರಿಗೆ ದ ಕ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಥ ಕೋಟ್ಯಾನ್ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಮುಂದಾಳುಗಳು ಹಾಜರಿದ್ದರು.

Leave a Reply

Your email address will not be published. Required fields are marked *