ಜಗದೀಶ್ಚಂದ್ರ ಅಂಚನ್‌ಗೆ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರದಾನ

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ ಕನ್ನಡ ಪಯಸ್ಸಿನಿ ಅಚೀವ್ ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆಯವರಿಗೆ ಪ್ರದಾನ ಮಾಡಲಾಯಿತು. ಎಸ್. ಜಗದೀಶ್ಚಂದ್ರ ಅಂಚನ್ ಕಾಸರಗೋಡು ನುಳ್ಳಿಪ್ಪಾಡಿಯಲ್ಲಿ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಕೆ.ವಾಮನ್ ರಾವ್, ನಿರ್ದೇಶಕ ಕೆ.ಎನ್.ವೆಂಕಟ್ರಮಣ ಹೊಳ್ಳ, ಕರ್ನಾಟಕ ಬ್ಯಾರಿ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ, ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ : ನಾಯ್ಕಾಪು, ಚುಟುಕು ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆ ರತ್ನಾ ಹಾಲಪ್ಪ ಗೌಡ, ಕನ್ನಡ ಭವನದ ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್, ಕಾರ್ಯದರ್ಶಿ ವಸಂತ್ ಕೆರೆಮನೆ ಮೊದಲಾದ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *