ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾಮಹೋತ್ಸವದ 44 ನೇ ವರ್ಧಂತ್ಯುತ್ಸವ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತ ನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ಪೂರ್ವಾಹ್ನ ಒಂಭತ್ತು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ಅಪರಾಹ್ನ ನಾಲ್ಕು ಗಂಟೆಯಿಂದ ನಾಂದಿಮಂಗಲ ಕಾರ್ಯಕ್ರಮ ನಡೆಯಿತು.
ಪೂಜ್ಯ 105 ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪಾದಾಭಿಷೇಕ ಮಂಗಳವಾರ ಬೆಳಿಗ್ಯೆ ಭವ್ಯ 8.30 ರಿಂದ ಬೀಡಿನಿಂದ ರತ್ನಗಿರಿಗೆ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ ನಡೆಯಿತು..
ಕಾರ್ಕಳ ಜೈನಮಠದ ಪೂಜ್ಯ ಲಲಿಕೀರ್ತಿಭಟ್ಟಾರಕರ ಸ್ವಾಮೀಜಿ ಮಂಗಲಪ್ರವಚನ ನೀಡಿದರು.

Leave a Reply

Your email address will not be published. Required fields are marked *