ರಾಜ್ಯಮಟ್ಟದ ದಸರಾ ಸಿಎಂ ಕಪ್‍ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ–2026ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾಪಟುಗಳು ಅಮೋಘ ಸಾಧನೆ ಮೆರೆದಿದ್ದಾರೆ. ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ವಿವಿಧ ತಂಡ ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿ, ಕ್ರೀಡಾಕೂಟದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ತಂಡ ಸ್ಪರ್ಧೆಗಳಲ್ಲಿ ಆಳ್ವಾಸ್‍ಗೆ ಮೇಲುಗೈ.

ಪುರುಷರ ವಿಭಾಗದ ಕಬಡ್ಡಿ ಸ್ಪರ್ಧೆಯಲ್ಲಿ ಆಳ್ವಾಸ್ ತಂಡ ಪ್ರಥಮ ಸ್ಥಾನ ಗಳಿಸಿದರೆ, ಬಾಲ್‍ಬ್ಯಾಡ್ಮಿಂಟನ್ ಮತ್ತು ಖೋ ಖೋ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಹಿಳೆಯರ ವಿಭಾಗದಲ್ಲಿ ಕಬಡ್ಡಿ ಹಾಗೂ ಬಾಲ್‍ಬ್ಯಾಡ್ಮಿಂಟನ್ ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಆಳ್ವಾಸ್ ಕ್ರೀಡಾಪಟುಗಳು ಶ್ರೇಷ್ಠತೆ ಮೆರೆದಿದ್ದಾರೆ.

ವೈಯಕ್ತಿಕ ಸ್ಪರ್ಧೆಗಳಲ್ಲೂ ಪದಕಗಳ ಬೇಟೆ
ಅಥ್ಲೆಟಿಕ್ಸ್ ನಲ್ಲಿ ಆಳ್ವಾಸ್ ಕ್ರೀಡಾಪಟುಗಳು 4 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ವೇಟ್‍ಲಿಫ್ಟಿಂಗ್‍ನಲ್ಲಿ 6 ಚಿನ್ನ, 6 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಯೋಗ ಸ್ಪರ್ಧೆಯಲ್ಲಿ 4 ಚಿನ್ನ ಮತ್ತು 2 ಬೆಳ್ಳಿ ಪದಕಗಳನ್ನು ಗಳಿಸಿದರೆ, ಕುಸ್ತಿ ಪಂದ್ಯಾವಳಿಯಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು ಜಯಿಸಿದ್ದಾರೆ.
ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *