ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‍ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್‍ನಲ್ಲಿ ಬ್ರಹ್ಮಾವರದ ಎಸ್‍ಎಂಎಸ್ ಕಾಲೇಜಿನ ತಂಡವನ್ನು ಪರಾಭವಗೊಳಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ವಿಜೇತ ತಂಡದ ಪಲ್ಲವಿ ಉತ್ತಮ ಬ್ಯಾಟರ್, ನಳಿನಾಕ್ಷಿ ಉತ್ತಮ ವಿಕೆಟ್ ಕೀಪರ್ ಮತ್ತು ಕೃಪಾ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡರು.
ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *