ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ 21ನೇ ಬಾರಿ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಪಿಯನ್ನು ತನ್ನದಾಗಿಸಿಕೊಂಡರು.

ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಡಂತ್ಯಾರ್ ನ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡವು 25-10 ಹಾಗೂ 25-12 ಅಂಕಗಳ ನೇರ ಸೆಟ್ನಲ್ಲಿ ಮಣಿಸಿತು. ಸೆಮಿಫೈನಲ್ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.
ಅಂತಿಮ ಫೈನಲ್ ಹಣಾಹಣಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ತಂಡವನ್ನು 25-18 ಮತ್ತು 25-16 ಅಂಕಗಳ ನೇರ ಸೆಟ್ನಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ಶಿಫ್ ಕಿರೀಟವನ್ನು 18ನೇ ಬಾರಿ ತನ್ನದಾಗಿಸಿಕೊಂಡಿತು.
ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.
