ಮಂಗಳೂರು ವಿವಿ ಪ್ರತಿನಿಧಿಸಿದ್ದ ಆಳ್ವಾಸ್‌ನ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್‌ನ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಮಹಿಳೆಯರ ತಂಡವು ನಾಲ್ಕನೇ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಂಗಳೂರು ವಿವಿ ಪ್ರತಿನಿಧಿಸಿದ ಮಹಿಳೆಯರ ತಂಡದಲ್ಲಿದ್ದ 06 ಜನ ಕ್ರೀಡಾಳುಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿದ್ದಾರೆ.

ಮಹಿಳೆಯರ ವಿಭಾಗದಲ್ಲಿ ಮಂಗಳೂರು ವಿವಿ 26 ಅಂಕಗಗಳೊಂದಿಗೆ ಪ್ರಥಮ ಸ್ಥಾನ ಪಡೆದರೆ, ಪುಣೆಯ ಸಾವಿತ್ರಿ ಭಾಯಿಫುಲೆ ವಿವಿ 67 ಅಂಕಗಗಳೊಂದಿಗೆ ದ್ವಿತೀಯ ಸ್ಥಾನ, 73 ಅಂಕಗಗಳೊಂದಿಗೆ ರೋಹ್ಟಕ್ ವಿವಿ ತೃತೀಯ ಸ್ಥಾನ ಗಳಿಸಿತು.
ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್‌ನ ತಾಮ್ಸಿ ಪ್ರಥಮ ಸ್ಥಾನ, ಯಾಶಿ ಸಾಚನ್ ತೃತೀಯ ಸ್ಥಾನ, ಜ್ಯೋತಿ ಒಂಬತ್ತನೇ ಸ್ಥಾನ, ಭಾಗೀರಥಿ ಹದಿಮೂರನೇ ಸ್ಥಾನ ಪಡೆದರು.

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಸ್ ಸಹಯೋಗದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜಿನ ಆಶ್ರಯದಲ್ಲಿ ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್ ಶುಕ್ರವಾರ ನಡೆಯಿತು. ಈ ಕ್ರೀಡಾಕೂಟಕ್ಕೆ ದೇಶದ 133 ವಿವಿಗಳಿಂದ 680ಕ್ಕೂ ಅಧಿಕ ಕ್ರೀಡಾಪಟುಗಳು ಹಾಗೂ 210ಕ್ಕೂ ಅಧಿಕ ಕೋಚ್‌ಗಳು, ಮ್ಯನೇರ‍್ಸ್ ಹಾಗೂ ದೈಹಿಕ ಶಿಕ್ಷಕರು ಭಾಗಿಯಾಗಿದ್ದರು.

ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಎಐಯು ವೀಕ್ಷಕ ಗುಲಾಬ್ ಸಿಂಗ್, ಕ್ರೀಡಾಕೂಟದ ತಾಂತ್ರಿಕ ನಿರ್ದೇಶಕ ಪ್ರೋ ಸುಂದರ್, ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಉಪಸ್ಥಿತರಿದ್ದರು. ಆಳ್ವಾಸ್ ಪದವಿ ಪೂರ್ವಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *