ಸಂತ ಅಲೋಶಿಯಸ್ ಉರ್ವಾದಲ್ಲಿ ವಾರ್ಷಿಕ ಕ್ರೀಡಾಕೂಟ ಸಂಭ್ರಮ

ಉರ್ವಾ: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ, ಉರ್ವಾದ ಶಾಲಾ ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟವು ಸಂಭ್ರಮದಿಂದ ಜರುಗಿತು.

ಚರ್ಚ್ ಪಾಲನಾ ಮಂಡಳಿಯ 21 ಆಯೋಗಗಳ ಸಂಯೋಜಕರಾದ ಗೇಬ್ರಿಯಲ್ ಸಿಡ್ನಿ ಸಾರ್ಥೋ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕರಾದ ವಂ. ಫಾದರ್ ಬೆಂಜಮಿನ್ ಪಿಂಟೋ ಅವರು ಮಾತನಾಡಿ, “ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆಯನ್ನು ಬೆಳೆಸಲು ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಅಲೋಶಿಯಸ್ ಡಿಸೋಜ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶೈಲಶ್ರೀ , ಹಿರಿಯ ಶಿಕ್ಷಕಿ ಲವೀನ ಡಿಕುನ್ಹಾ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್, ಸುಧಾಕರ್ ಹಾಗೂ ಹರಿಣಾಕ್ಷಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹರಿಣಾಕ್ಷಿ ಮತ್ತು ವಿಶಿತ ಸ್ವಾಗತಿಸಿದರು. ಶಾಲಾ ಉಪನಾಯಕಿ ಜೇನ್ ವಂದಿಸಿದರು.
ಕ್ರೀಡಾ ಮನೋಭಾವ, ಶಿಸ್ತು ಮತ್ತು ಸೌಹಾರ್ದತೆಯ ಸಂದೇಶದೊಂದಿಗೆ ಕ್ರೀಡಾಕೂಟವು ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *