ಮಂಗಳೂರು, ಅ. 31: ಶಕ್ತಿ ಪದವಿಪೂರ್ವ ಕಾಲೇಜು ಮತ್ತು ಶಕ್ತಿ ವಸತಿ ಶಾಲೆ ಶಕ್ತಿನಗರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿ ನ. 31 ರಂದು ನಡೆಯಿತು.








ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ನಡೆದ ಭಕ್ತಿ, ಶ್ರದ್ಧಾಕರುಣ, ನಿಷ್ಠಾ ನಾಮಾಂಕಿತ ದಳಗಳ ಪಥ ಸಂಚಲನವು ಮನ ಸೆಳೆಯುವಂತಿತ್ತು.ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದಂತಹ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಾದ ಆದಿತ್, ಸಾಗರ್, ಕೀರ್ತನ ಬೇಕಲ್, ವಿವಾನ್, ಸಿದ್ಧಿ ವಿನಾಯಕ ಭಟ್ ಇವರು ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿದರು.
ಮುಖ್ಯ ಅತಿಥಿಗಳಾದ ಸರಕಾರಿ ಪದವಿಪೂರ್ವ ಕಾಲೇಜು ನಾಲ್ಯಪದವು ಮಂಗಳೂರು ಇದರ ಪ್ರಾಂಶುಪಾಲರಾದ ಜಯಾನಂದ ಎನ್ ಸುವರ್ಣ ಅವರು ಮುಖ್ಯ ಅತಿಥಿಳಾಗಿ ಆಗಮಿಸಿ ಧ್ವಜಾರೋಹಣವನ್ನು ನೆರವೇರಿಸಿ ಶಾಂತಿಯ ಸಂಕೇತವಾದ ಶ್ವೇತ ಪಾರಿವಾಳಗಳನ್ನು ಹಾರಿಸುವ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಅತಿ ಹೆಚ್ಚು ಅಂಕಗಳನ್ನು ಗಳಿಸುವುದೊಂದೇ ವಿದ್ಯಾರ್ಥಿಯ ಧ್ಯೇಯ ಎಂದು ಬಿಂಬಿಸುತ್ತ ಇರುವ ಈ ಸಮಾಜದ ವ್ಯವಸ್ಥೆಯಲ್ಲಿ ಶಕ್ತಿ ವಿದ್ಯಾ ಸಂಸ್ಥೆಯು ಪಠ್ಯದ ಜೊತೆಜೊತೆಗೆ ಕ್ರೀಡೆಗಳಿಗೂ ಕೂಡ ಉತ್ತೇಜನ ನೀಡುತ್ತಿರುವುದು ಶ್ಲಾಘನಿಯಾವಾಗಿದೆ, ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಜೀವನದಲ್ಲಿ ಸಂಯಮ, ಶಿಸ್ತು, ಸಮಯ ಪಾಲನೆಗಳೊಂದಿಗೆ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರೋಗ್ಯಕರ ದೇಹದಲ್ಲಿ ಆರೋಗ್ಯಕರವಾದ ಮನಸ್ಸು ಇರುತ್ತದೆ ಹಾಗಾಗಿ ಪ್ರತಿ ದಿನ ಯಾವುದಾದರೂ ಒಂದು ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದರೆ, ತಂಡದಲ್ಲಿ ಸಮಭಾವ, ಒಗ್ಗಟ್ಟು ಕಲಿಯುತ್ತಾರೆ, ಸೋಲು ಅನ್ನುವುದನ್ನು ಸೋಲಿನ ಹಾಗೆ ಸ್ವೀಕರಿಸದೆ ಅದನ್ನು ಒಂದು ಪಾಠಎಂದು ಭಾವಿಸಿದರೆ ಗೆಲುವು ನಿಮ್ಮದಾಗುತ್ತದೆ. ಹಾಗಾಗಿ ನಾವೆಲ್ಲರೂ ಸಕ್ರಿಯವಾಗಿ ಕ್ರೀಡೆಗಳಲ್ಲಿ ಭಾಗವಹಿಸೋಣ ಎಂದು ಹೇಳುತ್ತಾ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಲ್ಲಿ ಆಸಿನರಾಗಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ ಕೆ ಸಿ ನಾೈಕ್ ಅವರು ಮಾತನಾಡಿ ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ವಿದ್ಯಾರ್ಥಿಗಳು ದೇಶದ ಸಂಪತ್ತಾಗಬೇಕು ಈ ದಿನ ಸಂಭ್ರಮದ ದಿನ ಎಲ್ಲಾ ಮಕ್ಕಳು ಚೆನ್ನಾಗಿ ಎಲ್ಲಾ ಕ್ರೀಡೆಗಳಲ್ಲಿ ಭಾಗವಸಿ ಶುಭವಾಗಲಿ ಎಂದು ತಿಳಿಸಿದರು.
ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ, ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲರಾದ ಸುರೇಖಾ ಆರ್ ಭಟ್ ಇವರು ಉಪಸ್ಥಿತರಿದ್ದರು. ಶಿಕ್ಷಕಿ ಅಶ್ವಿನಿ ಸ್ವಾಗತಿಸಿದರು, ಚೇತನ ನಿರೂಪಿಸಿ ವಂದಿಸಿದರು.
