ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಂ, ಬೌದ್ಧ, ಜೈನ್ಸ್, ಪಾರ್ಸಿ, ಸಿಖ್ಖ ಜನಾಂಗದ(ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ)2026-27 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‍ಗಳಾದ ವೈದ್ಯಕೀಯ( ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಸ್( ಬಿ.ಆಯುಷ್, ಎಂ.ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ( ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್( ಬಿ.ಆರ್ಕ್, ಎಂ.ಆರ್ಕ್),ಬಿ.ಫಾರ್ಮ್, ಎಂ.ಫಾರ್ಮ್, ಫಾರ್ಮಾ ಡಿ, ಡಿಫಾರ್ಮಾ, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ. ಬಿ.ಎಸ್ಸಿ ಇನ್ ಹಾರ್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೈರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರ್ನರಿ ಆ್ಯಂಡ್ ಅನಿಮಲ್ ಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್ ಆ್ಯಂಡ್ ಕಮ್ಯೂನಿಟಿ ಸೈನ್ಸಸ್, ಫುಡ್ ನ್ಯೂಟ್ರಿಶಿಯನ್ ಆ್ಯಂಡ್ ಡೈಟೆಟಿಕ್ಸ್ ವಿದ್ಯಾರ್ಥಿಗಳಿಗೆ ನಿಗಮದ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 30.

ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ 12% ರಷ್ಟು ಆನ್‍ಲೈನ್ ಮುಖಾಂತರ ಮಾತ್ರ ಪಾವತಿಸಬೇಕಾಗಿರುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಸಾಲಕ್ಕೆ ಸಂಬಂಧಿಸಿದಂತೆ ಅಗತ್ಯ ಇತರೆ ದಾಖಲೆಗಳನ್ನು ನಗರದ ಪಾಂಡೇಶ್ವರ ಮೌಲಾನಾಅಜಾದ್ ಭವನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
