ಮಂಗಳೂರು: 2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ಸಮುದಾಯದ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ವಿದ್ಯಾರ್ಥಿಗಳು https://sevasindhu.karnataka.gov.in/Sevasindhu/DepartmentServices ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಕೋರ್ಸ್‍ನ ಅವಧಿಗೆ ಒಂದು ಬಾರಿ ಮಾತ್ರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು (08242433078), ಬಂಟ್ವಾಳ(08255232470), ಬೆಳ್ತಂಗಡಿ(08256295335), ಪುತ್ತೂರು(08251237078), ಸುಳ್ಯ(08257230666) ಹಾಗೂ ಇಲಾಖೆಯ ವೆಬ್‍ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿಅಥವಾ ಸಹಾಯವಾಣಿ8277799990ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
