ಚೆಸ್ ಪಂದ್ಯಾಕೂಟದಲ್ಲಿ ಅಜೆಕಾರು ಜ್ಞಾನಸುಧಾದ ಅವನಿ ಆರ್ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಜೆಕಾರು: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ, ಶಿವಪುರದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಪಂದ್ಯಾಕೂಟದಲ್ಲಿ ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಅವನಿ ಆರ್ ಶೆಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ವಿದ್ಯಾರ್ಥಿನಿಯ ಈ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿ, ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

Leave a Reply

Your email address will not be published. Required fields are marked *