ಮಾಳ: ಸ್ವಚ್ಛ ಬ್ರಿಗೇಡ್ ವತಿಯಿಂದ ಶ್ರೀ ಗುರುಕುಲ ಅನುದಾನಿತ ಶಾಲೆ ಯಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಕಾರ್ಯಕ್ರಮ

ಕಾರ್ಕಳ: ಸ್ವಚ್ಛ ಬ್ರಿಗೇಡ್ ಇವರ ವತಿಯಿಂದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡದ ಸದಸ್ಯರಾದ ಮನಿಷಾ ಕಾಮತ್, ಪ್ರಕಾಶ್ ರಾವ್ ಮತ್ತು ಶ್ರೀನಿವಾಸ್ ಭಟ್ ವಿದ್ಯಾರ್ಥಿಗಳೊಂದಿಗೆ ಸಂವಹನ ಕಾರ್ಯಕ್ರಮ ನಡೆಸಿದರು.

ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡಬೇಕು ಮತ್ತು ನೀರಿನ ಬಳಕೆಯನ್ನು ಮಿತಿಯಾಗಿ ನಿರ್ವಹಿಸಬೇಕು ಹಾಗೂ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಪ್ಲಾಸ್ಟಿಕ್ ಬದಲು ಬಟ್ಟೆ ಚೀಲಗಳನ್ನು ಉಪಯೋಗಿಸಬೇಕು ಎಂಬುದನ್ನು ನಮ್ಮ ಮಕ್ಕಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿ ಉತ್ತರವನ್ನು ಪಡೆದವರಿಗೆ ಬಹುಮಾನವನ್ನು ನೀಡಲಾಯಿತು. ಈ ಮಾಹಿತಿ ಕಾರ್ಯಾಗಾರದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ರಾಮ ಸೇರಿಗಾರ್ ಉಪಸ್ಥಿತರಿದ್ದು ತಂಡದ ಸದಸ್ಯರಿಗೆ ನೆನಪಿನ ಕಾಣಿಕೆಯಾಗಿ ಶಾಲೆಯ ಅಮೃತ ಮಹೋತ್ಸವದ ಸ್ಮರಣ ಸಂಚಿಕೆ ನೀಡಲಾಯಿತು. ಮುಖ್ಯ ಶಿಕ್ಷಕರು ಕಾರ್ಯಕ್ರಮ ನಡೆಸಿ ಸ್ವಾಗತಿಸಿ ಧನ್ಯವಾದಗಳು ನೀಡಿದರು. ಶಾಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *