ಮಾಳ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ

ಮಾಳ, ಅ.02: ಮಹಾತ್ಮ ಗಾಂಧೀಜಿಯವರ 157 ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ 122ನೇ ಜಯಂತಿಯನ್ನು ಇಂದು ಮಾಳ ಗುರುಕುಲ ಶಾಲೆಯಲ್ಲಿ ಆಚರಿಸಲಾಯಿತು.

ಗಾಂಧಿ ಮತ್ತು ಶಾಸ್ತ್ರೀಯವರ ಭಾವಚಿತ್ರಗಳಿಗೆ ಹೂಮಾಲೆ ಹಾಕಿ ಸಿಂಗರಿಸಿ, ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಲಾಯಿತು. ಮಕ್ಕಳು ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿ ಗೌರವ ನಮನ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಜಗೋಳಿ ವಲಯದ ಮೇಲ್ವಿಚಾರಕರಾದ ಶಿವರಾಮ್, ಸೇವಾ ಪ್ರತಿನಿಧಿ ಸುಮಲತಾ, ಮಾಳ ಒಕ್ಕೂಟದ ಅಧ್ಯಕ್ಷರಾದ ದಿನೇಶ್, ಆಡಳಿತ ಮಂಡಳಿಯ ಸದಸ್ಯರಾದ ಸುಧೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಿವರಾಮ್ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಯೋಗದ ಮಹತ್ವವನ್ನು ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯರು ಇಂದಿನ ಕಾರ್ಯಕ್ರಮದ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಜ್ಯೋತಿ ಇವರು ನಿರ್ವಹಿಸಿದರು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *