ವರದಿ ರಾಯಿ ರಾಜಕುಮಾರ
ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ, ಬೆಳುವಾಯಿ ಇದರ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯ ಕಾರ್ಯಕ್ರಮವು ನೆರವೇರಿತು.

ಮಹಿಳಾ ಘಟಕದ ಅಧ್ಯಕ್ಷರಾದ ಶುಭಾ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಿಳಾ ಘಟಕದ ಕಾರ್ಯದರ್ಶಿ ಸುಜಯ ಸ್ವಾಗತಿಸಿದರು. ವಿನುಷಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕದ ಎಲ್ಲಾ ಹಿರಿಯ ಮತ್ತು ಕಿರಿಯ ಪದಾಧಿಕಾರಿಗಳು ಭಾಗವಹಿಸಿದ್ದು, ದಾನಿಗಳ ಸಹಕಾರದಿಂದ ಸಮಾಜದ ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಾಲಾ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಕೋಶಾಧಿಕಾರಿ ಅನುಷಾ ವಂದಿಸಿದರು.
