ಕಾರ್ಕಳ ಸಾಣೂರು ಬಳಿ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಾರ್ಕಳ, ಸೆ 20: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ಮಧ್ಯೆ ಕಾರ್ಕಳ ಸಾಣೂರು ಬಳಿ ಸೆ. 20 ಮಧ್ಯಾಹ್ನ ಸಂಭವಿಸಿದೆ. ಪರಿಣಾಮ ರಮಾನಾಥ ರೈ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಹಾಗೂ ಬಸ್ ನಲ್ಲಿದ್ದ 6 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡವರು ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಮಾನಾಥ ರೈ ಅವರು ಕಾರ್ಯಕ್ರಮ ನಿಮಿತ್ತ ಕಾರ್ಕಳ ಬರುತ್ತಿದ್ದು ಕಾರ್ಕಳದಿಂದ ಮೂಡುಬಿದಿರೆಯಾಗಿ ಮಂಗಳೂರು ಸಾಗುತ್ತಿದ್ದ ವಿಶಾಲ್ ಬಸ್‌ ಮಧ್ಯೆ ಸಾಣೂರು ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಕಾಂಗ್ರೆಸ್ ಮುಖಂಡರಾದ ಉದಯ ಕುಮಾ‌ರ್ ಶೆಟ್ಟಿ ಮುನಿಯಾಲು, ಸುಧಾಕರ್ ಶೆಟ್ಟಿ ಸೇರಿದಂತೆ ಅನೇಕರು ಆಸ್ಪತ್ರೆಗೆ ಧಾವಿಸಿ ರಮಾನಾಥ ರೈ ಅವರ ಆರೋಗ್ಯ ವಿಚಾರಿಸಿದರು.

Leave a Reply

Your email address will not be published. Required fields are marked *