ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸಮಾರಂಭ: ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನೇರ ಪ್ರಸಾರ ಆಯೋಜನೆ

ಕಾರ್ಕಳ: ಕೆಪಿಸಿಸಿ ಅಧ್ಯಕ್ಷರಾಗಿ ಉಪ ಮುಖ್ಯಮಂತ್ರಿಗಳಾಗಿ ಜವಾಬ್ದಾರಿ ನಿರ್ವಹಿಸಿ ಈಗ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 03 ಬುಧವಾರದಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಮದ್ಯಾಹ್ನ 3.30 ರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಪ್ರಮಾಣವಚನ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.

ಪ್ರಮಾಣವಚನದ ನೇರ ಪ್ರಸಾರ ಮತ್ತು ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹಾಗೂ ಬ್ಲಾಕ್ ಅಧ್ಯಕ್ಷರುಗಳಾದ ಶುಭದ ರಾವ್, ಗೋಪಿನಾತ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *