ಅಜೆಕಾರು: ಇಲ್ಲಿನ ಪದ್ಮನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 05 ರಂದು ವಿದ್ಯಾರ್ಥಿಗಳಿಗೆ ‘ಸ್ವಚ್ಛತಾ ಅರಿವು’ ಮತ್ತು ‘ಪರಿಸರ ಜಾಗೃತಿ’ ಮೂಡಿಸುವ ವಿಶೇಷ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮರ್ಣೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ (PDO) ಅಂಕಿತಾ ನಾಯಕ್ ಅವರು ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ಬಳಿಕ ಮಾತನಾಡಿದ ಅವರು, “ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಪ್ರಮುಖ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಸಾರ್ವಜನಿಕ ಸಂಪರ್ಕಾಧಿಕಾರಿಗಳು (PRO), ಶಿಕ್ಷಕ ವೃಂದ ಹಾಗೂ ಶಾಲಾ-ಕಾಲೇಜಿನ ಸಮಸ್ತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
