ಸಂತ ಅಲೋಶಿಯಸ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉರ್ವಾ, ಮಂಗಳೂರು: ಸಂತ ಅಲೋಶಿಯಸ್ ಶಾಲೆಯಲ್ಲಿ ಜುಲೈ 27 ರಂದು ದಿವಸವನ್ನು ಅತ್ಯಂತ ಗೌರವ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು.

ಹತ್ತನೇ ತರಗತಿಯ ವಿದ್ಯಾರ್ಥಿಗಳು ದೇಶಭಕ್ತಿಗೀತೆ ಹಾಗೂ ಘೋಷಣೆಗಳ ಮೂಲಕ ಯೋಧರ ತ್ಯಾಗ, ಶೌರ್ಯ ಹಾಗೂ ದೇಶಸೇವೆಯನ್ನು ಸ್ಮರಿಸಿದರು.
ಮುಖ್ಯ ಶಿಕ್ಷಕರು ಯೋಧರಿಗೆ ಗೌರವವನ್ನು ಸಲ್ಲಿಸುತ್ತಾ ಘೋಷವಾಕ್ಯಗಳೊಂದಿಗೆ ವಿದ್ಯಾರ್ಥಿಗಳು ದೇಶಭಕ್ತಿ, ದೇಶಸೇವೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆನೀಡಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಈ ಕಾರ್ಯಕ್ರಮದ ಸಂಯೋಜಕರಾದ ರವಿಶಂಕರ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಹನ್ನಾ ನಿರೂಪಿಸಿ ರಿಯಾ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *