ಪ.ಪೂ. ಕಾಲೇಜುಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ; ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ, (ಪದವಿಪೂರ್ವ) ದ.ಕ. ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 25 ಚಿನ್ನ, 16 ಬೆಳ್ಳಿ ಮತ್ತು 18 ಕಂಚಿನ ಪದಕಗಳೊಂದಿಗೆ 59 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 104 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 85 ಅಂಕ ಒಟ್ಟು 189 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ಆಳ್ವಾಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಮಧು ಜಿ ಆರ್, ಬೆಳ್ತಂಗಡಿ ಸರಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಧಾಕೃಷ್ಣ, ಉಪನ್ಯಾಸಕರಾದ ಕುಮಾರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ರೈ ಹಾಗೂ ಹರ್ಷಿತಾ ಶೆಟ್ಟಿ ಉಪಸ್ಥಿತರಿದ್ದರು. ಶಾಂತರಾಮ ರೈ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *