ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಆಳ್ವಾಸ್‍ಗೆ 21ನೇ ಬಾರಿಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ತಂಡವನ್ನು 2-0 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.

ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಸರಕಾರಿ ಪದವಿಪೂರ್ವ ಕಾಲೇಜು ನಾಲ್ಯಪದವು ಮಂಗಳೂರು ತಂಡವನ್ನು 2-0 ಅಂಕಗಳಿಂದ ಸೋಲಿಸಿ 21ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *