ಮಂಗಳೂರು: ಡಾ. ಪಿ. ದಯಾನಂದ ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಕಾಲೇಜಿನ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ಪಠ್ಯಕ್ರಮದ ಭಾಗವಾಗಿ ತೃತೀಯ ಲಿಂಗಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೀದಿನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಪರಿವರ್ತನ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಜನಾ ಚಲವಾದಿ ಚಾಲನೆ ನೀಡಿದರು. ಅವರು ಮಾತನಾಡಿ, ಸಮಾಜದಲ್ಲಿ ತೃತೀಯ ಲಿಂಗಿಗಳ ಬಗ್ಗೆ ಅರಿವು ಮತ್ತು ಸ್ವೀಕಾರಾರ್ಹತೆ ಹೆಚ್ಚಿಸುವ ಅಗತ್ಯವಿದೆ ಎಂದು ತಿಳಿಸಿದರು.



ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಸಿಟಿ ಮಿಷನ್ ಮ್ಯಾನೇಜರ್ ಚಿತ್ತರಂಜನ್ ದಾಸ್ ಹಾಗೂ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ನಿತಿನ್ ಚೋಲ್ವೇಕರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಯೋಜಕಿ ಶ್ರೀಮತಿ ಅರುಣ ಕುಮಾರಿ, ಉಪನ್ಯಾಸಕರಾದ ಗಣೇಶ್, ಅಕ್ಷತಾ ಕೆ.ಎಂ., ಪುಷ್ಪಾ ಹೆಚ್., ಸುಚಿತ್ರ ಹಾಗೂ ಉಷಾ ಕುಮಾರಿ ಭಾಗವಹಿಸಿದ್ದರು.
ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ದ್ವಿತೀಯ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿಗಳು ಬೀದಿನಾಟಕವನ್ನು ಪ್ರದರ್ಶಿಸಿದರು. ಎಂ.ಎಸ್.ಡಬ್ಲ್ಯೂ. ವಿದ್ಯಾರ್ಥಿ ಅವಿನಾಶ್ ನಾಟಕವನ್ನು ರಚಿಸಿ ನಿರ್ದೇಶಿಸಿದ್ದು, ವಿದ್ಯಾರ್ಥಿಗಳಾದ ನಾಗಭೂಷಣ್, ಮಂದಿರ ಮತ್ತು ದೀಕ್ಷಾ ಕಾರ್ಯಕ್ರಮದ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಹಾಗೂ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
