ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ

ಮಂಗಳೂರು: ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಇಂಜಿನಿಯರ್ಸ್ ಡೇ ಸಂಭ್ರಮ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳವಾರ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಡೇಮಿಯನ್ ಆಂಟನಿ ಡಿ ಮೆಲ್ಲೋ ಅವರು ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ಅವರ ಜೀವನ ಸಾಧನೆ ಆದರ್ಶವಾಗಿದೆ. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವ ಸಂಕಲ್ಪ ಸಾಧನೆ ನಮ್ಮೆಲ್ಲರದ್ದಾಗಬೇಕು. ದೇಶದಲ್ಲಿ ಶಿಕ್ಷಣಕ್ಕೆ ಲಭ್ಯವಿರುವ ವಿದ್ಯಾರ್ಥಿ ವೇತನಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬೆಳೆದು ದೇಶದ ಪ್ರಗತಿಗೆ ಕೊಡುಗೆ ನೀಡುವಂತಾಗಬೇಕು ಎಂದು ಅವರು ಹಾರೈಸಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ. ಪ್ರಿಯಾ ವಿ.ಫ್ರ್ಯಾಂಕ್ ವಂದಿಸಿದರು. ಸಾಂಸ್ಕೃತಿಕ ಸಂಯೋಜಕ ನವೀನ್.ಎ. ಕಲಾಲ್ ಸಹಿತ ಬೋಧಕರು, ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *