ಮುದರಂಗಡಿ ಮಾಜಿ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ

ಶಿರ್ವ, ಆಗಸ್ಟ್ 07: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಪ್ರಿನ್ಸ್ ಪಾಯಿಂಟ್ ಮಾಲಕ, ಗುತ್ತಿಗೆದಾದ ದೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಕುರಿತು ವರದಿಯಾಗಿದೆ. ಆ. 2ರಂದು ಮಧ್ಯಾಹ್ನ ತಮ್ಮ ಕಚೇರಿಗೆ ತೆರೆಳುತ್ತಿದ್ದ ವೇಳೆ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಅವರಿಗೆ ಗುಂದಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.



ಮುದರಂಗಡಿಯ ಪ್ರಿಸ್ಟ್ ಬಾರ್ಗನ ಮಾಲಕ ಆದಾನಿ ಪವರ್ನ ಗುತ್ತಿಗೆದಾರರಾಗಿ, ಬಸ್ ಮಾಲಕರಾಗಿದ್ದ ಡೇವಿಂಗ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದರು. ಮುದರಂಗಡಿ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *