ಮಂಗಳೂರು : ತುಳುನಾಡಿನ ಹುಲಿವೇಷ ಸಂಸ್ಕ್ರತಿಯ ಸರದಾರರಾದ ಗಂಗಾಧರ ದೇವಾಡಿಗ ಕದ್ರಿ (ಪಿಲಿ ಅಣ್ಣು) ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಅ.18 ರಂದು ಬೆಳಿಗ್ಗೆ 10.30 ಗಂಟೆಗೆ ಮಣ್ಣಗುಡ್ಡೆಯ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಣ್ಣಗುಡ್ಡೆಯ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನಡೆಯುವ ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಮಂಗಳೂರು ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಅವರು ಚಾವಡಿ ಸನ್ಮಾನದ ಗೌರವ ಪ್ರಧಾನ ಮಾಡುವರು.
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶಾಲೆಟ್ ಪಿಂಟೋ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಮಣ್ಣಗುಡ್ಡೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಬರ್ಕೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಯಜ್ಞೇಶ್ವರ ಬರ್ಕೆ, ಬಳ್ಳಾಲ್ ಭಾಗ್ ಫ್ರೆಂಡ್ಸ್ ಅಧ್ಯಕ್ಷ ರಕ್ಷಿತ್ ಕೊಟ್ಟಾರಿ, ಶಾಲೆಯ ಮುಖ್ಯೋಪಾಧ್ಯಾಯಿನ ನಳಿನಿ ಪಿ. ಶೆಟ್ಟಿ ಉಪಸ್ಥಿತರಿರುವರು ಎಂದು ತುಳು ಅಕಾಡೆಮಿಯ ಪ್ರಕಟಣೆ ತಿಳಿಸಿದೆ..
