ವಿದ್ಯಾರ್ಥಿ ಸಂಘ ಚುನಾವಣೆ ಪುನರಾರಂಭಕ್ಕೆ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಕೀರ್ತನ್ ಗೌಡ ಕೊಡಪಾಲ

ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದೆ.

ವಿದ್ಯಾರ್ಥಿ ಸಂಘ ಚುನಾವಣೆಗಳು ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.

ದೀರ್ಘ ಅವಧಿಯ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಸರ್ಕಾರದ ಈ ಕ್ರಮ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ.

ಶೈಕ್ಷಣಿಕ ವಾತಾವರಣದಲ್ಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಜಿಲ್ಲಾ ಏನ್ ಎಸ್ ಯು ಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲರವರು ಪತ್ರಿಕಾ ಹೇಳಿಕೆಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *