37ನೇ ಮರೋಳಿ ವಾರ್ಡಿನಲ್ಲಿ Rs.6 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ – ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಐವನ್ ಡಿʼಸೋಜಾ ಕರೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಂಪರ್ಕ ರಸ್ತೆಗಳು, ಹದಗೆಟ್ಟಿರುವ ಪ್ರಮುಖ ರಸ್ತೆಗಳು ಹಾಗೂ ದೇವಸ್ಥಾನ ಮತ್ತು ಚರ್ಚ್‌ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗಾಗಿ ಮಹಾತ್ಮ ಗಾಂಧಿ ವಿಕಾಸ ಯೋಜನೆಯ 2ನೇ ಹಂತದಡಿ ಸುಮಾರು Rs.6 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾ ಅವರು, ರಾಜ್ಯ ಸರ್ಕಾರವು ವಿವಿಧ ಮೂಲಗಳಿಂದ ರಾಜ್ಯಾದ್ಯಂತ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿದ್ದು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸೇರಿದಂತೆ ಮಂಗಳೂರಿನ ರಸ್ತೆ ಅಭಿವೃದ್ಧಿಗಾಗಿ ಸುಮಾರು Rs.400 ಕೋಟಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹಂತ ಹಂತವಾಗಿ ಪ್ರಾರಂಭವಾಗಲಿವೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಮೂಲಕ ಮಹಾತ್ಮ ಗಾಂಧಿ ವಿಕಾಸ ಯೋಜನೆಯಡಿ ಈಗಾಗಲೇ ವಿವಿಧ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬಾಕಿ ಉಳಿದಿರುವ ಕಾಮಗಾರಿಗಳಿಗೂ ಅನುದಾನ ಬಿಡುಗಡೆಯಾಗಿದ್ದು, ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಇಂಜಿನಿಯರ್‌ಗಳು ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಗುಣಮಟ್ಟಕ್ಕೆ ಆದ್ಯತೆ ನೀಡಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಐವನ್ ಡಿʼಸೋಜಾ ಅವರು ಸೂಚನೆ ನೀಡಿದರು.

ಮಾಜಿ ಶಾಸಕರಾದ ಜೆ.ಆರ್. ಲೋಬೊ, ಮಾಜಿ ಕಾರ್ಪೊರೇಟರ್‌ಗಳಾದ ಕೇಶವ ಮರೋಳಿ ಹಾಗೂ ನವೀನ್ ಡಿ’ಸೋಜಾ, ಬಜೋಡಿಯ ಇನ್ಫೆಂಟ್ ಮೇರಿ ಚರ್ಚ್‌ನ ಧರ್ಮಗುರುಗಳಾದ ರೆವರೆಂಡ್ ಫಾದರ್ ಪ್ರಕಾಶ್ ಡಿ’ಕುನ್ಹಾ, ವಾರ್ಡ್ ಅಧ್ಯಕ್ಷರಾದ ಗಂಗಾಧರ್ ಪೂಜಾರಿ, ಜಾಯ್ I ಈ ಸಂದರ್ಭದಲ್ಲಿ ಕ್ರಾಸ್ತಾ, ರೊನಾಲ್ಡ್ ಫೆರ್ನಾಂಡಿಸ್, ಸುದೀರ್ ಕುಮಾರ್, ಬೂತ್ ಅಧ್ಯಕ್ಷರು, ಬಿಎಲ್‌ಎ ಶಾಂತಿ ಡಿ’ಸೋಜಾ, ತೇಜಾಕ್ಷ, ಸುವರ್ಣ ನಟ್ಟಿಮನೆ, ಹರಿಣಾಕ್ಷ ಬಂಡಾರಿ, ಸಂಪತ್ ಕುಮಾರ್, ಪ್ರಭಾಕರ್ ಪಂಪುಮನೆ, ಚಂದ್ರಹಾಸ ಪಂಪುಮನೆ, ದೇವದಾಸ್ ದೊಡ್ಡಮನೆ, ಲೆಸ್ಲಿ ಬಜೋಡಿ, ವಿಲ್ಫಿ, ಗ್ರಿಫನ್, ಭಾಸ್ಕರ್ ಮರೋಳಿ, ಪ್ರದೀಪ್ ಮರೋಳಿ, ರಾಕೇಶ್ ಅಳಂಗಾರ್, ರಾಜೇಶ್ ಅಳಂಗಾರ್, ಶೀನಾ ಅಳಂಗಾರ್, ರಾಗಿಣಿ ಬಜೋಡಿ, ಟಿ.ಕೆ. ಸುದೀರ್, ಕೃತಿನ್ ಸೇರಿದಂತೆ ಮರೋಳಿಯ ಹಿತೈಷಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *