ಉಜಿರೆ: ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಸ್ಯಗಳ ಬಗ್ಯೆ ಮಾಹಿತಿ

ಉಜಿರೆ: ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮದಡಿಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಸ್ಯಶಾಸ್ತç ವಿಭಾಗದ ಆಶ್ರಯದಲ್ಲಿ ಸೋಮವಾರ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ  ಏಕದಳ ಮತ್ತು ದ್ವಿದಳ ಸಸ್ಯಗಳ ಕಾಂಡದ ಒಳವಿನ್ಯಾಸ ಹಾಗೂ ಬಾಷ್ಪೀಕರಣ ಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ಉಪಯುಕ್ತ ಮಾಹಿತಿ ನೀಡಲಾಯಿತು.

ಸಸ್ಯಶಾಸ್ತ್ರ ಉಪನ್ಯಾಸಕ ಅಭಿಲಾಷ್, ಕೆ.ಎಸ್. ಸವಿವರ ಮಾಹಿತಿ ನೀಡಿದ್ದು ವಿದ್ಯಾರ್ಥಿಗಳು ಆಸಕ್ತಿಯಿಂದ ವೀಕ್ಷಿಸಿ ಸಂತಸಪಟ್ಟರು. ಶಾಲಾ ಮುಖ್ಯೋಪಾಧ್ಯಾಯ ರಮೇಶ ಮಯ್ಯ ಉಪಸ್ಥಿತರಿದ್ದರು. ಸಸ್ಯಶಾಸ್ತ್ರ ವಿಭಾಗದ ಸಹಾಯಕ ಸುಂದರ ಹಾಗೂ ವಿದ್ಯಾರ್ಥಿಗಳಾದ ಮೇಘಾ, ಜ್ಯೋತಿಕಾ ಮತ್ತು ಸಿಂಚನಾ ಸಹಕರಿಸಿದರು.

Leave a Reply

Your email address will not be published. Required fields are marked *