ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಾಳ, ಕಾರ್ಕಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕಿ ಪ್ರತೀಕ್ಷಾ ಅವರು ಯೋಗದ ಮಹತ್ವವನ್ನು ತಿಳಿಸುತ್ತಾ, ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗದಿಂದ ಆಗುವ ಪ್ರಯೋಜನಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ಸ್ವತಃ ಮಾಡಿ ತೋರಿಸಿ ಅಭ್ಯಾಸ ಮಾಡಿಸಿದರು.

ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಯೋಗಾಸನಗಳಲ್ಲಿ ಭಾಗವಹಿಸಿದರು. ‘ಅಮೃತ ವೇದಿಕೆ’ಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *