ಮಂಗಳೂರು ಜೂ.8: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿಮಿಟೆಡ್ ಟೀಮ್ ಈಶ್ವರ್ ಮಲ್ಪೆ ಮತ್ತು ಲಕ್ಷ್ಮೀ ಆಯುರ್ವೇದಿಕ್ ಕ್ಲಿನಿಕ್ ಇವರು ಆಯೋಜಿಸಿರುವ ಈ ಶಿಬಿರದಲ್ಲಿ ಡಾ. ಜ್ಯೋತಿ ಕೆ. BAMS, MD(Ayu) ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ
ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣಯಂತಕ್ಕೆ ಸಹಾಯಧನ ಕಾರ್ಯಕ್ರಮ ವಿತರಣೆ ಜೂ.10 2026ನೇ ಬುಧವಾರ ಬೆಳಗ್ಗೆ 10:00 ರಿಂದ 5:00 ರವರೆಗೆ ನಗರದ ಲಕ್ಷ್ಮೀ ಕ್ಲಿನಿಕ್, ಪ್ಲವರ್ ಮಾರ್ಕೆಟ್ ರಸ್ತೆ, ರ್ಕಾಸ್ಟ್ರೀಟ್,ಮಂಗಳೂರು 575001 ನಡೆಯಲಿದೆ.

ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು ಈಗ ನಾವು ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು , ನಮ್ಮ ಸಂಸ್ಥೆಯಾದ ಟೀಮ್ ಈಶ್ವರ್ ಮಲ್ಪೆಯವರು ಶ್ರವಣದ ಯಂತ್ರಕ್ಕೆ (Hearing Machine) ಆಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸಲಾಗುತ್ತಿದ್ದು ರೋಗಿಗಳು ಈ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ. ಈ ಶಿಬಿರದಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಕೇಳಿಸಿಕೊಳ್ಳುವ ತೊಂದರೆಯವರಿಗೆ ಸಂತೋಷವನ್ನು ನೀಡಿ.
ಸೂಚನೆಗಳು :
ನೋಂದಣಿ ಕಡ್ಡಾಯವಾಗಿದೆ ಕರೆಮಾಡಿ ನೋಂದಾಯಿಸಿಕೊಳ್ಳಿ.
ಹಿರಿಯರಿಗೆ ಮೊದಲ ಆದ್ಯತೆ. (ಸಂಬಧಿಕರ ಜೊತೆ ಬನ್ನಿ) ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ (Old Report) ಇದ್ದರೆ ಜೊತೆಯಲ್ಲಿ ತನ್ನಿ.
ಮೊದಲು ನೋಂದಾಯಿಸುವ 30 ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.ಈಶ್ವರ್ ಮಲ್ಪೆ ಟೀಮ್ ನವರು ದೇಣಿಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ. ಹೆಚ್ಚಿನ ಮಾಹಿತಿಗಾಗಿ +91 8951804399 (whatsup) ಸಂಪರ್ಕಿಸಬಹುದು.ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
