ಉಡುಪಿ: ನ. 27 ರಂದು ಕನಕದಾಸ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ (ರಿ) ಹಾಗೂ ಹಾಲುಮತ ಮಹಾಸಭಾ (ರಿ) ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕನಕದಾಸ ಜಯಂತಿ – 2026 ಕಾರ್ಯಕ್ರಮವು ನವೆಂಬರ್ 27 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡುವಿನ ಗೋವಿಂದ ಕಲ್ಯಾಣ ಮಂಟಪ ಇಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ ಎಸ್ ತಂಗಡಗಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಕನಕದಾಸ ಸಮಾಜದ ಜಿಲ್ಲಾ ಅಧ್ಯಕ್ಷ ಹನುಮಂತ ಡೊಳ್ಳಿನ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಉಡುಪಿಯ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಲಿದ್ದಾರೆ.

Leave a Reply

Your email address will not be published. Required fields are marked *