ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಖೇಲೋ ಕ್ರಿಯೇಟಿವ್ ಜೂನಿಯರ್ಸ್ ವಾರ್ಷಿಕ ಕ್ರೀಡಾಕೂಟ

ಕಾರ್ಕಳ: ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಖೇಲೋ ಕ್ರಿಯೇಟಿವ್ ಜೂನಿಯರ್ಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯು ನವೆಂಬರ್ 21 ಶನಿವಾರದಂದು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್, ಸಪ್ತಗಿರಿ ಕ್ಯಾಂಪಸ್‌ನಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಚಿನ್ನದ ಪದಕ ಗೆದ್ದಿರುವ ನಿಧಿ ಯು. ಆಚಾರ್ ಹಾಗೂ ಕ್ರಿಯೇಟಿವ್ ಕಾಲೇಜಿನ ಸಂಸ್ಥಾಪಕರಾದ ಡಾ. ಗಣನಾಥ್ ಶೆಟ್ಟಿ, ಆದರ್ಶ್ ಎಂ. ಕೆ., ಶುಭಲಕ್ಷ್ಮಿ ಅಶ್ವಥ್ ಹಾಗೂ ಆಂಗ್ಲ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಶಿಸ್ತು ಮುಖ್ಯ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ಅಕ್ಷತಾ ಆರ್. ಶೆಣೈ, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕ್ರೀಡಾಕೂಟದಲ್ಲಿ ಮಕ್ಕಳ ಕ್ರೀಡಾ ಕೌಶಲ್ಯ, ತಂಡದ ಮನೋಭಾವ ಮತ್ತು ಆತ್ಮವಿಶ್ವಾಸ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ವಿಜೇತ ಮಕ್ಕಳಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿದರು.

ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ದೈಹಿಕ ಶಿಕ್ಷಣ ನಿರ್ದೇಶಕರು ಶಿವಾನಂದ ಎಂ. ಬಿಳಗಿ ಅವರು ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದರು.

ಕೊನೆಯಲ್ಲಿ ಶಾಲೆಯ ಪರವಾಗಿ ಎಲ್ಲಾ ಅತಿಥಿಗಳಿಗೆ, ಪೋಷಕರಿಗೆ ಮತ್ತು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *