ಮಾಳ: ಶ್ರೀ ಗುರುಕುಲ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಏ. 14 ರಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಹೂ ಹಾರಗಳಿಂದ ಅಲಂಕರಿಸಿ ದೀಪ ಬೆಳಗಿಸಿ, ಪುಷ್ಪಾರ್ಚನೆ ಗೈದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಮತ್ತು ಸಹ ಶಿಕ್ಷಕಿ ಪ್ರತಿಕ್ಷಾ ರವರು ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದ ನಿರ್ವಹಣೆಯನ್ನು ಅನುಪಮಾ ರವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಮಕ್ಕಳು ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *