ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆಳ್ವಾಸ್‍ಗೆ ಮೂರು ವಿಭಾಗಗಳಲ್ಲಿ ಆಳ್ವಾಸ್‍ಗೆ ಪ್ರಥಮ ಸ್ಥಾನ

ಮೂಡುಬಿದಿರೆ: ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಸುಬ್ರಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಸಹಯೋಗದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಸ್ಪರ್ಧೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.
ಕಬ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ, ಬುಲ್‍ಬುಲ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸ್ಕೌಟ್ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿವೆ.

ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್‍ನ ಮೂರು ತಂಡಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *