ನಿಟ್ಟೆಯ ಒಂಬತ್ತು ವಿದ್ಯಾರ್ಥಿನಿಯರು ಫುಟ್ಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದಿದೆ.

ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿದ ಡಾ. ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು, ನಿಟ್ಟೆಯ ವಿದ್ಯಾರ್ಥಿನಿಯರಾದ ತಂಡದ ನಾಯಕಿ ಸ್ಮೃತಿ ಕೆ. ಶೆಟ್ಟಿ, ಅತ್ಯುತ್ತಮ ಸ್ಟ್ರೈಕರ್ ಪ್ರಶಸ್ತಿಯನ್ನು ಪಡೆದ ಕ್ಲೆರಾ ಭೀಮಣ್ಣನವರ್, ಅತ್ಯುತ್ತಮ ಫುಟ್ಬಾಲ್ ರಕ್ಷಕ ಪ್ರಶಸ್ತಿಯನ್ನು ಪಡೆದ ಪ್ರಭಾವತಿ ಹೊಳೆಮ್ಮನವರ್, ಅವಿನ್ಯಾ ಶೆಟ್ಟಿ, ಸುಜೀಕ್ಷಾ, ಲೂರ್ದ್ ಮೇರಿ ತುಮಕಣ್ಣನವರ್, ಅಶ್ವಿನಿ ಹೂಗಾಡಿ, ಮಂಜುಳಾ ದೇಸಾಯಿ, ಶಕುಂತಲಾ ಮೇಲಿನಮನಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಬೋಧಕ- ಬೋಧಕೇತರ ವರ್ಗದವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *