ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗೆ ಪ್ರಶಸ್ತಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಆದಿತ್ಯ ಕುಮಾರ್ ಝಾ ಅವರು ಫೆಬ್ರವರಿ 2026 ರಲ್ಲಿ ನಡೆದ ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್ ನಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.

ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ 10 ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದವು. ಈ ಕಾರ್ಯಕ್ರಮದ ಟಾಪ್ 3 ವಿಜೇತರಲ್ಲಿ ಆದಿತ್ಯ ಕುಮಾರ್ ಝಾ ಒಬ್ಬರಾಗಿರುವುದು ನಿಟ್ಟೆ ತಾಂತ್ರಿಕ ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *