ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಎ. ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಅಕ್ಟೋಬರ್ 25, 2026ರಂದು ದಕ್ಷಿಣ ಕನ್ನಡ ಜಿಲ್ಲೆಯ ಆಳಂಕಾರಿನ ದೀನದಯಾಳು ರೈತ ಸಭಾಭವನದಲ್ಲಿ ನಡೆದ ಐರನ್ ಟೆಂಪಲ್ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಎರಡು ಸ್ಥಾನಗಳನ್ನು ಗಳಿಸಿದ್ದಾರೆ.

ಸ್ಪರ್ಧೆಯ ಹಿರಿಯರ ವಿಭಾಗದಲ್ಲಿ ನಾಲ್ಕನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಕ್ರೀಡಾ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.
