ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ – ಉದಯ್ ಶೆಟ್ಟಿ ಮುನಿಯಾಲು

ಕಾರ್ಕಳ: ಬಹು ನಿರೀಕ್ಷಿತ ರಾಜ್ಯ ಬಜೆಟನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜನರ ಅನುಕೂಲತೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಬಜೆಟ್ ಮಂಡಿಸಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ಹೇಳಿದ್ದಾರೆ.

ವಿಶೇಷವಾಗಿ ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್‌ ದರ Rs. 10,000ದಿಂದ Rs. 20,000ಕ್ಕೆ ಹೆಚ್ಚಳ, ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್ ಸ್ಥಾಪನೆ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸುವ ಯೋಜನೆಯಿದೆ ಎಂದು ಹೇಳಿದ್ದಾರೆ.

ಶಿಕ್ಷಣಕ್ಕೆ ವಿಶೇಷವಾಗಿ ಯೋಜನೆ ರೂಪಿಸಿ 3,900 ಕೋಟಿ ಅನುದಾನದಡಿ ʼಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸುವ ಯೋಜನೆ ನೀಡಲಾಗಿದ್ದು ಆ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಲು ಸರಕಾರ ಬದ್ಧವಾಗಿದೆ. ರಾಜ್ಯದ ಕಟ್ಟ ಕಡೆಯ ವ್ಯಕ್ತಿಯ ಕುರಿತು ಕಾಳಜಿ ಹೊಂದಿರುವ ರಾಜ್ಯ ಸರಕಾರ ಜನಪರ ಬಜೆಟ್ ಮಂಡಿಸಿದೆ ಎಂದು ಉದಯ್ ಶೆಟ್ಟಿ ಅವರು ಹೇಳಿದರು.

Leave a Reply

Your email address will not be published. Required fields are marked *