ಲೇಡಿಗೋಷನ್ ಆಸ್ಪತ್ರೆಗೆ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳ ವಿತರಣೆ

ಮಂಗಳೂರು: ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಮೂರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿಶೇಷ ಕೊಡುಗೆಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್.ಎಂ.ಆರ್. ಮಾತನಾಡಿ, ಆಸ್ಪತ್ರೆಯ ರೋಗಿಗಳು, ವೈದ್ಯರುಗಳು ಹಾಗೂ ಶುಶ್ರೂಷಕಿಯರಿಗೆ ಸಂಬಂಧಿಸಿದ ಯಾವುದೇ ಸರ್ಜಿಕಲ್ ಬಟ್ಟೆಗಳು ನ್ಯೂನ್ಯತೆಗಳನ್ನು ಕಂಡಂತ ಸಂದರ್ಭದಲ್ಲಿ ಅವೆಲ್ಲವನ್ನು ಮತ್ತೆ ಸುಸ್ಥಿತಿಯಲ್ಲಿ ಉಪಯೋಗ ಮಾಡುವ ಮೊದಲು ಅದರ ಮೂಲ ಸ್ವರೂಪವನ್ನು ಪಡೆಯಲು ಈ ಹೊಲಿಗೆ ಯಂತ್ರ ಬಹಳಷ್ಟು ಉಪಕಾರಿಯಾಗುತ್ತದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಮುಖ್ಯಸ್ಥ ಸಿ.ಎ.ಶಾಂತಾರಾಮ ಶೆಟ್ಟಿ ಮಾತನಾಡಿ, ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ದೂರಗಾಮಿ ಪರಿಣಾಮ ಉಳ್ಳ ಇಂಥ ಯೋಜನೆಗಳಿಗೆ ಪೂರಕವಾಗಿ ಸ್ಪಂದಿಸಲು ರೆಡ್ ಕ್ರಾಸ್ ಸಂಸ್ಥೆ ಹೆಮ್ಮೆ ಪಡುತ್ತದೆ. ಸರಕಾರದ ಆರ್ಥಿಕತೆಯನ್ನು ಸಬಲೀಕರಣಗೊಳಿಸಲು ಇದು ಪರೋಕ್ಷವಾಗಿ ಸಹಕಾರಿ ಎಂದರು.
ವೇದಿಕೆಯಲ್ಲಿ ರೆಡ್ ಕ್ರಾಸ್ ಸೆಕ್ರೆಟರಿ ಡಾ.ಸತೀಶ್ ಕುಮಾರ್ ಶೆಟ್ಟಿ,ಕೋಶಾಧಿಕಾರಿ ಗುರುದತ್ತ್ ,ಕೋ ಆರ್ಡಿನೇಟರ್ ಗಿರೀಶ್,ನಿವಾಸಿ ವೈದ್ಯಾಧಿಕಾರಿ ಡಾ.ಜಗದೀಶ್, ಹಿರಿಯ ತಜ್ಞ ಡಾ.ದಯಾನಂದ್,ನಸಿರ್ಂಗ್ ಸೂಪರಿಂಟೆಂಡೆಂಟ್ ಗೀತಾ ಹಾಗೂ ಮಲ್ಲಿಕಾ, ಶುಶ್ರೂಷಾಧೀಕಾರಿ ಅಂಬಿಕಾ, ಜಯಲಕ್ಷ್ಮಿ ಉಪಸ್ಥಿತರಿದ್ದರು.
ಜ್ಯೋತಿ ಪ್ರಭಾ ಸ್ವಾಗತಿಸಿದರು.

Leave a Reply

Your email address will not be published. Required fields are marked *