ಮಡಂತ್ಯಾರು: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು.



ಯುವ ಉದ್ಯಮಿ, ಸಮಾಜಸೇವಕ ಹಾರಿಸ್ ಮದ್ದಡ್ಕ ಪಂದ್ಯಾಟವನ್ನು ಉದ್ಘಾಟಿಸಿದರು. ಪುಟ್ಬಾಲ್ ಆಟ ಕೇವಲ ಆಟವಲ್ಲ ಇದು ಶಿಸ್ತು , ಸಂಯಮದ, ಕ್ರೀಡೆಯಾಗಿದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ನೀಡುವುದರ ಜೊತೆಗೆ ಶಾರೀರಿಕ ಹತೋಟಿಯನ್ನು ನೀಡುತ್ತದೆ . ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಎರಡನ್ನು ಸ್ವೀಕರಿಸುವ ಮನೋಭಾವವನ್ನು ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು. ತಾಲೂಕು ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಪಟುಗಳು ಸಾಧನೆ ಮಾಡುವಂತಾಗಲೆಂದು ಅವರು ಶುಭ ಹಾರೈಸಿದರು.
ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಡಾ| ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ನೆಲ್ಸನ್ ಲಸ್ರಾದೊ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು, ಕಾಲೇಜಿನ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಸ್ವಾಗತಿಸಿ, ಉಪನ್ಯಾಸಕ ವಸಂತ್ ಶೆಟ್ಟಿ ವಂದಿಸಿ,ಕಾರ್ಯಕ್ರಮ ನಿರೂಪಿಸಿದರು.
ಫಲಿತಾಂಶ: ಎಸ್ .ಡಿ.ಯಂ ಪದವಿ ಪೂರ್ವ ಕಾಲೇಜು ಉಜಿರೆ ಪ್ರಥಮ ಸ್ಥಾನ ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರು ದ್ವಿತೀಯ ಸ್ಥಾನ ಪಡೆಯಿತು. ಸಮಾರೋಪ ಕಾರ್ಯಕ್ರಮದಲ್ಲಿ. ಪೂಂಜಾಲಕಟ್ಟೆ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಚಿದಾನಂದ ರೈ ಎಂ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜ, ಕಾಲೇಜಿನ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಬಹುಮಾನ ವಿತರಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಸಂಜಿತ್ ಕುಮಾರ್ ಶೆಟ್ಟಿ ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.
