ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಸಮರ್ಥ್ ಶೆಟ್ಟಿ SGFI ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು, ನ. 11: ಮಧ್ಯಪ್ರದೇಶದ ಗ್ವಾಲಿಯರ್‍ನಲ್ಲಿ ಅಕ್ಟೋಬರ್ 23ರಿಂದ 25ರ ವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ಶೆಟ್ಟಿ ಚಿನ್ನದ ಪದಕವನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಸಾಧನೆಯೊಂದಿಗೆ ಉತ್ತರ ಪ್ರದೇಶದ ಪ್ರಯಾಗ್‍ ರಾಜ್‍ನಲ್ಲಿ ನಡೆಯಲಿರುವ ಎಸ್‍ಜಿಎಫ್‍ಐ (SಉಈI) ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ವಿದ್ಯಾಭಾರತಿಯ 19 ವರ್ಷದೊಳಗಿನವರ ವಾಲಿಬಾಲ್‍ ತಂಡವನ್ನು ಪ್ರತಿನಿಧಿಸಲು ಅವರು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಸಂಜಿತ್ ನಾೈಕ್. ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರದೀಪ್‍ ಕುಮಾರ್ ಶೆಟ್ಟಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಸುರೇಖಾ ಆರ್ ಭಟ್‍ ಅವರು ಸಮರ್ಥ್ ಶೆಟ್ಟಿ ಅವರ ಕ್ರೀಡಾ ಸಾಧನೆಯನ್ನು ಅಭಿನಂದಿಸಿ, ಮುಂದಿನ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸಲು ಶುಭ ಹಾರೈಸಿದರು.

Leave a Reply

Your email address will not be published. Required fields are marked *