ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಸ್.ಐ.ಆರ್ ಕಾರ್ಯಾಗಾರ

ಮಂಗಳೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿಧಾನಸಭಾ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಗುರುವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಬ್ರಾಹೀಂ ನವಾಝ್, ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಮತದಾರರ ಪಟ್ಟಿಯಲ್ಲಿನ ಅರ್ಹರ ಹೆಸರು ಉಳಿಯಬೇಕು.  ಕಾರ್ಯಕರ್ತರು ಮುಂದಿನ ಮೂರು ತಿಂಗಳ ಕಾಲ ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡಬೇಕಾಗಿದೆ ಎಂದು ಕರೆ ನೀಡಿದರು. 

ಈ ಸಂದರ್ಭ ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾ. ಆರ್ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ಪೂಜಾರ್, ಬಶೀರ್ ಕಣ್ಣೂರು, ದೀಕ್ಷಿತ್ ಅತ್ತಾವರ, ಜಿಲ್ಲಾ ಉಸ್ತುವಾರಿ ನಾಸೀರ್ ಸಾಮಾಣಿಗೆ, ಆಸೀಫ್ ಬಜಾಲ್, ಬ್ಲಾಕ್ ಅಧ್ಯಕ್ಷರು, ವಿಧಾನಸಭಾ ಅಧ್ಯಕ್ಷರು ಉಪಸ್ಥಿತರಿದ್ದರು. ಹಾಸೀರ್ ಪೆರಿಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *