ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ಧಾರಿ ಖ್ಯಾತ ಬ್ಯೂಟೀಶಿಯನ್ ಉಮಾ ಜಯಕುಮಾರ್ (ವನ್ ಮಿನಿಟ್ ಉಮಾ) ಇವರಿಂದ ಒಂದು ದಿನದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮವನ್ನು ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್. ಜರ್ನಾದನ್ ಅವರು ಉದ್ಘಾಟಿಸಿ, ಕೌಶಲ್ಯಾಧಾರಿತ ತರಬೇತಿಗಳು ಸ್ವ ಉದ್ಯೋಗಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀಮತಿ ಉಮಾ ಜಯಕುಮಾರ್ ಅವರು ಬ್ಯೂಟೀಶಿಯನ್ ವೃತ್ತಿಯಲ್ಲಿ ತಾಂತ್ರಿಕ ನೈಪುಣ್ಯ, ಸಮಯ ನಿರ್ವಹಣೆ ಹಾಗೂ ಗ್ರಾಹಕ ತೃಪ್ತಿಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ಗ್ರಾಮೀಣ ಯುವಜನತೆಗೆ ಕೌಶಲ್ಯ ತರಬೇತಿ ನೀಡುವಲ್ಲಿ ರುಡ್ ಸೆಟ್ ಸಂಸ್ಥೆಯ ಪಾತ್ರವನ್ನು ವಿವರಿಸಿದರು.

ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಸ್ವಾಗತಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಅವರು ಮಾಡಿದರು. ಧನ್ಯವಾದ ಸಮರ್ಪಣೆಯನ್ನು ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಅವರು ನೆರವೇರಿಸಿದರು.

ಪ್ರಾರ್ಥನೆಯನ್ನು ಸೀತಾ ಹೆಗಡೆ ಹಾಗೂ ಶ್ರೀಮತಿ ಲಕ್ಷ್ಮಿ ಅವರು ಸಲ್ಲಿಸಿದರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕಿಯಾದ ಮಾಧವಿ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಯ ಕೇಂದ್ರ ಕಚೇರಿಯ ಹಿರಿಯ ಉಪನ್ಯಾಸಕಿ ಅನಸೂಯಾ, ಉಪನ್ಯಾಸಕರಾದ ಲೋಹಿತ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ರುಡ್ ಸೆಟ್ ಸಂಸ್ಥೆಯ ಬ್ಯೂಟೀಶಿಯನ್ ತರಬೇತಿ ಪಡೆದ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *