ಕಾರ್ಕಳ: ಫೆ. 18 ರಿಂದ ಫೆ. 28 ರ ವರೆಗೆ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

ಕಾರ್ಕಳ, ಏ 19: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಶೇಕ ಇದರ ಕಾರ್ಯಲಯ ಉದ್ಘಾಟನೆ ಮತ್ತು ಮಹಾ ಮಸ್ತಕಾಭಿಷೇಕ ಇದರ ದಿನಾಂಕ ಘೋಷಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೆಗ್ಡೆ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು ಇದರ ಅಧ್ಯಕ್ಷ ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು 2027 ರ ಫೆ. 18 ರಿಂದ ಫೆ. 28 ರ ವರೆಗೆ ಮಹಾಮಸ್ತಕಾಭಿಷೇಕ ನಡೆಯಲಿರುವುದಾಗಿ ಘೋಷಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಮಹಾಮಸ್ತಕಾಭಿಷೇಕ ಸಮಿತಿಯ ಉಪಾಧ್ಯಕ್ಷ ಕೆ.ಪಿ. ಜಗದೀಶ್ ಅಧಿಕಾರಿ, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್‌ ಆಳ್ವ, ಅಧಾನಿ ಗ್ರೂಪ್ ಕರ್ನಾಟಕ ಇದರ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಅಧ್ಯಕ್ಷರಾದ ಕಿಶೋರ್ ಅಳ್ವ, ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಮಸ್ತಕಾಭಿಷೇಕ ಸಮಿತಿಯ ಮುಖ್ಯಸ್ಥರುಗಳಾದ ಪ್ರಭಾತ್ ಕುಮಾ‌ರ್, ಪುಷ್ಪರಾಜ್ ಜೈನ್, ಅನಂತರಾಜ ಪೂವಣಿ, ಸಂಪತ್ ಸಾಮ್ರಾಜ್ಯ ಸುಧೀರ್ ಪಡಿವಾಳ್, ಕೆ.ಜಯಕೀರ್ತಿ ಕಡಂಬ, ಹೇಮಚಂದ್ರ ಜೈನ್, ಸುನಿಲ್ ಕುಮಾರ್ ಬಜಗೋಳಿ, ಮಹಾವೀರ ಹೆಗ್ಡೆ ಭರತ್ ಕುಮಾರ್ ಜೈನ್, ಶೀತಲ್ ಜೈನ್, ಸುಭಾಷ್ಟಂದ್ರ ಚೌಟ, ಶಾಂತಿರಾಜ ಜೈನ್, ಮಹೇಂದ್ರ ವರ್ಮ ಜೈನ್, ಶಿಶುಪಾಲ ಜೈನ್ ಹಾಗೂ ಇತರರು ಉಪಸ್ಥಿತರಿದ್ದರು.



Leave a Reply

Your email address will not be published. Required fields are marked *