ಮಾಳ, ಸೆ 05: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ, ಇಲ್ಲಿ ಸೆ.05 ಶನಿವಾರದಂದು ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಾಳ ಮಲ್ಲಾರು ಮತ್ತು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ, ಇವರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ರತ್ನಾಕರ ಜೈನ್ ಕಡಂದಲಾಜೆ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರಾದ ನೀಲೇಶ್ ತೆಂಡುಲ್ಕರ್, ನಮ್ಮ ಶಾಲಾ ಆಡಳಿತ ಮಂಡಳಿಯ ಶಿಕ್ಷಕರಕ್ಷಕ ಸಂಘದ ಕಾರ್ಯದರ್ಶಿಯಾದ ದಿನೇಶ್, ನಮ್ಮ ಶಾಲಾ ಮುಖ್ಯೋಪಾಧ್ಯಾಯರಾದ ಪೂರ್ಣಿಮಾ ಶೆಣೈ ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ನಮ್ಮ ಶಾಲಾ ಮುಖ್ಯೋಪಾಧ್ಯಾಯರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಮುದ್ದಾದ ಕೃಷ್ಣವೇಷ ಧಾರಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಈ ಕಾರ್ಯಕ್ರಮದಲ್ಲಿ ಪೋಷಕರು, ಪೂರ್ವ ವಿದ್ಯಾರ್ಥಿಗಳು, ಗಣೇಶೋತ್ಸವ ಸಮಿತಿಯ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮವನ್ನು ಶೋಭಾ ನಿರೂಪಿಸಿ, ಜ್ಯೋತಿ ಸ್ವಾಗತಿಸಿ, ನುಪಮಾ ಜೋಯ್ ವಂದನಾರ್ಪಣೆ ಗೈದರು.
