ವಿದ್ಯಾರ್ಥಿಗಳು ಭವಿಷ್ಯದ ಬಗ್ಯೆ ಸುಂದರ ಕನಸು ಕಂಡು ಅದನ್ನು ನನಸಾಗಿಸಲು ಪ್ರಯತ್ನಿಸಬೇಕು – ಸೋನಿಯಾ ಯಶೋವರ್ಮ

ಉಜಿರೆ: ಪಿ.ಯು.ಸಿ. ಶಿಕ್ಷಣದ ಪ್ರಮುಖ ಹಂತವಾಗಿದ್ದು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಯೆ ಸುಂದರ ಕನಸು ಕಂಡು ಅದನ್ನು ನನಸಾಗಿಸಲು ಪ್ರಯತ್ನಿಸಬೇಕು ಎಂದು ಸೋನಿಯಾ ಯಶೋವರ್ಮ ಹೇಳಿದರು.

ಅವರು ಬುಧವಾರ ಉಜಿರೆಯಲ್ಲಿ ಎಸ್.ಡಿ.ಎಂ. ಸನಿವಾಸ ಪದವಿಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಿಸ್ತು ಮತ್ತು ಸಮಯಪಾಲನೆಯೊಂದಿಗೆ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಬಹುದು ಎಂದು ಹೇಳಿ ಅವರು ಶುಭ ಹಾರೈಸಿದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಐ.ಟಿ. ಮತ್ತು ವಿದ್ಯಾರ್ಥಿನಿಲಯಗಳ ಆಡಳಿತ ವಿಭಾಗದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರನ್‌ವರ್ಮ ಮಾತನಾಡಿ, ವಸತಿ ನಿಲಯಗಳು ಶಿಕ್ಷಣದೊಂದಿಗೆ ಜೀವನ ಶಿಕ್ಷಣವನ್ನೂ, ಉತ್ತಮ ಸಂಸ್ಕಾರವನ್ನೂ ನೀಡುತ್ತವೆ. ವಿದ್ಯಾರ್ಥಿಗಳು ಹೊಣೆಗಾರಿಕೆಯೊಂದಿಗೆ ಕೃತಜ್ಞತಾ ಭಾವವನ್ನೂ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಸಂಸ್ಥೆಯ ಪ್ರಾಂಶುಪಾಲ ಸುನಿಲ್ ಪಂಡಿತ್ ಅಧ್ಯಕ್ಷತೆ ವಹಿಸಿದರು.
ಉಪನ್ಯಾಸಕಿ ವಾಣಿ ಸ್ವಾಗತಿಸಿದರು. ಕವಿತಾ ಧನ್ಯವಾದವಿತ್ತರು.

Leave a Reply

Your email address will not be published. Required fields are marked *