ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಸಾಮೂಹಿಕವಾಗಿ ಏಕಕಾಲದಲ್ಲಿ ಮೊಳಗಿದ ವಂದೇ ಮಾತರಂ ಗೀತೆ

ಮಂಗಳೂರು: ವಂದೇ ಮಾತರಂ ಗೀತೆಯ 150 ವರ್ಷಗಳ ಪೂರ್ಣಗೊಂಡಿರುವ ಸಂದರ್ಭದಲ್ಲಿ, ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನ್ ವತಿಯಿಂದ 25 ಸೆಪ್ಟೆಂಬರ್ 2026 ರಂದು ಬೆಳಿಗ್ಗೆ 11:00 ಗಂಟೆಗೆ ದೇಶದಾದ್ಯಂತ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಒಂದೇ ಸಮಯದಲ್ಲಿ, ಒಂದೇ ಲಯದಲ್ಲಿ ಆಯೋಜಿಸಲಾಗಿತ್ತು.

“ನಮಾಮಿ ಭಾರತಮ್ ವಂದೇ ಮಾತರಂ” ಶೀರ್ಷಿಕೆಯ ಅಡಿಯಲ್ಲಿ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ನಮ್ಮ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ 283 ವಿದ್ಯಾರ್ಥಿಗಳು, 70 ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂಧಿಗಳ ಸಮ್ಮುಖದಲ್ಲಿ ವಂದೇ ಮಾತರಂ ಗೀತೆಯನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಹಾಡಲಾಯಿತು. ಈ ಸಂದರ್ಭದಲ್ಲಿ ಶಕ್ತಿ ರೆಸಿಡೆನ್ಶಿಯಲ್ ಪ್ರಾಂಶುಪಾಲರಾದ ಸುರೇಖಾ ಆರ್ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *